ಕುಶಾಲನಗರ, ನ.22 NEWS DESK : ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಅಕ್ಷರ ಜ್ಯೋತಿ ಯಾತ್ರೆ ಗೆ ಕುಶಾಲನಗರ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ನೆರೆಯ ಮೈಸೂರು ಜಿಲ್ಲೆಯಿಂದ ಆಗಮಿಸಿದ ಆಗಮಿಸಿದ ಅಕ್ಷರ ಜ್ಯೋತಿ ಯಾತ್ರೆಯನ್ನು ಕುಶಾಲನಗರ ಅನುಗ್ರಹ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಬಳಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಬರ ಮಾಡಿಕೊಂಡರು. ಅಕ್ಷರ ಜ್ಯೋತಿ ಯಾತ್ರೆಯ ಉದ್ದೇಶ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ರಾಜ್ಯದ ಎಲ್ಲಾ ಗಡಿ ಪ್ರದೇಶಗಳು ಹಾಗೂ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 63 ದಿನಗಳ ಕಾಲ ಅಕ್ಷರ ಜ್ಯೋತಿ ಯಾತ್ರೆ ನಡೆಯಲಿದ್ದು, ಪ್ರೌಢ ಹಾಗೂ ಪಿಯು ತರಗತಿಗಳ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ, ಮಾತೃ ಪ್ರೇಮ ಮೂಡಿಸುವುದು. ಒಳ್ಳೆಯ ಹವ್ಯಾಸ ಹಾಗೂ ಅಭ್ಯಾಸಗಳ ಮೂಲಕ ಉತ್ತಮ ಚಾರಿತ್ರ್ಯ ವುಳ್ಳವರಾಗಿ ಅವರನ್ನು ರೂಪಿಸಲು ಪೂರಕವಾದ ಮಾಹಿತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ನಾಡಿನ ಸಂಸ್ಕ್ರತಿ, ಆಚಾರ ವಿಚಾರಗಳ ಬಗ್ಗೆ ಒಲವು ಮೂಡುವಂತೆ ಮಾಡುವ ಸದುದ್ಧೇಶ ಯಾತ್ರೆಯದ್ದಾಗಿದೆ ಎಂದು ಮಾಹಿತಿ ನೀಡಿದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ಲಿಂಗಮೂರ್ತಿ, ಮಹಾಸಭಾದ ನಿರ್ದೇಶಕ ಪಿ.ಮಹಾದೇವಪ್ಪ, ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್, ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ , ನಿವೃತ್ತ ಮುಖ್ಯ ಶಿಕ್ಷಕ ಎಂ.ಎಸ್.ಗಣೇಶ್, ಕಸಾಪ ತಾಲ್ಲೂಕು ಸಮಿತಿಯ ಸದಸ್ಯ ಟಿ.ಬಿ.ಮಂಜುನಾಥ್, ಕವಿಯತ್ರಿ ಲೀಲಾಕುಮಾರಿ ತೊಡಿಕಾನ, ಶಿಕ್ಷಕ ಹುಲುಸೆ ಬಸವರಾಜ್, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇತರರು ಇದ್ದರು.