ಮಡಿಕೇರಿ ನ.22 NEWS DESK : ಹೊಸೂರು ನ್ಯಾಯಾಲಯದ ವಕೀಲರ ಹಲ್ಲೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯ ಸಂಕೀಣ೯ದ ಮುಂದೆ ಪ್ರತಿಭಟನೆ ನಡೆಸಿದ ವಕೀಲರು ಇಂಥ ಪ್ರಕರಣಗಳು ಮರುಕಳಿಸದಂತೆ ವಕೀಲ ವೃಂದಕ್ಕೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಎರಡು ದಿನಗಳ ಹಿಂದೆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರು ನ್ಯಾಯಲಯದ ಆವರಣದಲ್ಲಿ ವಕೀಲ ಕಣ್ಣನ್ ಅವರ ಮೇಲೆ ಹಲ್ಲೆ ಮಾಡಲಾಗಿದೆ,
ಇಂದಿನ ದಿನಗಳಲ್ಲಿ ನ್ಯಾಯಾಲಯದ ಅಧಿಕಾರಿಗಳಾಗಿರುವ ವಕೀಲರು ಭಯದ ವಾತವರಣದಲ್ಲಿ ಕೆಲಸ ನಿರ್ವಹಿಸುವಂತ್ತಾಗಿದೆ. ವಕೀಲರಿಗೆ ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಮರುಕಳುಹಿಸುತ್ತಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ವಕೀಲರುಗಳಿಗೆ ಸೂಕ್ತ ರಕ್ಷಣೆಯನ್ನು ನೀಡುವಂತಾಗಬೇಕು. ಕೃತ್ಯ ಎಸಗಿದ ಅಪರಾಧಿಗೆ ಶೀಘ್ರ ನ್ಯಾಯಾಂಗ ವಿಚಾರಣೆಯಾಗಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಮಡಿಕೇರಿ ವಕೀಲರ ಸಂಘದ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಜಂಟಿ ಕಾಯ೯ದಶಿ೯ ಪವನ್ ಪೆಮ್ಮಯ್ಯ, ಖಜಾಂಜಿ ಜಿ.ಆರ್.ರವಿಶಂಕರ್ ಸೇರಿದಂತೆ ವಕೀಲ ವೃಂದದವರು ಪಾಲ್ಗೊಂಡಿದ್ದರು.