


ಮಡಿಕೇರಿ ನ.23 NEWS DESK : ಎನ್‌ಸಿಸಿ ದಿನಾಚರಣೆ ಅಂಗವಾಗಿ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್ ಗಳು ನಗರದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಪ್ರತಿಮೆಯನ್ನು ಸ್ವಚ್ಚಗೊಳಿಸಿದರು. ನಗರದ ಮೈಸೂರು ರಸ್ತೆಯಲ್ಲಿನ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ವೃತ್ತದ ಬಳಿಯಿರುವ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಪ್ರತಿಮೆಯನ್ನು ಶುಚಿಗೊಳಿಸಿ, ಈ ವ್ಯಾಪ್ತಿಯಲ್ಲಿದ್ದ ಕಾಡು ಗಿಡಗಳನ್ನು ಕಡಿದು, ಕುರಚಲು ಗಿಡಗಳನ್ನು ತೆರವುಗೊಳಿಸಲಾಯಿತು. 40 ಕೆಡೆಟ್ ಗಳು ಪಾಲ್ಗೊಂಡಿದ್ದ ಈ ಸ್ವಚ್ಚತಾ ಅಭಿಯಾನದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರಾ ಆಡಳಿತಾಧಿಕಾರಿ ಪಿ.ರವಿ, ಎನ್ ಸಿಸಿ ಅಧಿಕಾರಿ ದಾಮೋದರ ಪಾಲ್ಗೊಂಡಿದ್ದರು.













