ಮಡಿಕೇರಿ NEWS DESK ನ.23 : ಬಹುಮತ ಪಡೆದು ಜನಹಿತ ಕಾಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಪಪ್ರಚಾರದ ಮೂಲಕ ಅಸ್ಥಿರಗೊಳಿಸಲು ಯತ್ನಿಸಿದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಉಪ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲುವು ತಂದುಕೊಡುವ ಮೂಲಕ ಜನ ಗ್ಯಾರಂಟಿ ಸರ್ಕಾರದ ಪರ ನಾವಿದ್ದೇವೆ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಜನ ಮನ್ನಣೆ ಗಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹತಾಶೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿದರು. ಮುಡಾ ಆಸ್ತಿ ಗೊಂದಲ, ವಾಲ್ಮೀಕಿ ಅಭಿವೃಧ್ಧಿ ನಿಗಮದ ಅನುದಾನ, ವಕ್ಫ್ ಆಸ್ತಿ ವಿವಾದ ಸೇರಿದಂತೆ ಇನ್ನೂ ಕೆಲವು ಪ್ರಕರಣಗಳ ಕುರಿತು ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡಲಾಯಿತು. ಅಲ್ಲದೆ ಈ ವಿಚಾರಗಳನ್ನು ಮುಂದಿಟ್ಟುಕೊಡು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿಬಿಡಬಹುದೆನ್ನುವ ಭ್ರಮೆ ಎನ್‌ಡಿಎ ಮೈತ್ರಿ ಕೂಟಕ್ಕಿತ್ತು. ಆದರೆ ಮತದಾರ ಪ್ರಭು ಅಪಪ್ರಚಾರಗಳಿಗೆ ಕಿವಿಗೊಡದೆ ಜನಪರ ಸರ್ಕಾರವನ್ನು ಬೆಂಬಲಿಸಿದ್ದಾರೆ. ಉಪ ಚುನಾವಣೆಯ ಸಂದರ್ಭದಲ್ಲಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಒಡಕು ಮೂಡಿಸುವ ಮತ್ತು ಆ ಮೂಲಕ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಭ್ರಮೆ ಬಿಜೆಪಿಯಲ್ಲಿತ್ತು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಯವರನ್ನೇ ಸೋಲಿಸಿ ಮನೆಗೆ ಕಳುಹಿಸಿದರು. ಈ ಹಿಂದೆ ಚನ್ನಪಟ್ಟಣದಲ್ಲಿ ವೆಲ್ಡ್ ಮಾಡುವವರು, ಗುಜುರಿ ಹಾಯುವವರೇ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದರು. ಆದರೆ ಉಪ ಚುನಾವಣೆಯಲ್ಲಿ ಅವರುಗಳನ್ನೇ ಕೇವಲವಾಗಿ ಕಂಡ ಪರಿಣಾಮ ಪುತ್ರ ನಿಖಿಲ್ ಅವರ ಸೋಲಾಗಿದೆ ಎಂದು ಎಂ.ಎ.ಕಲೀಲ್ ಬಾಷ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಮತ್ತು ಗ್ಯಾರಂಟಿ ಯೋಜನೆಗಳ ಯಶಸ್ವೀ ಅನುಷ್ಠಾನವೇ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಕಾರಣವಾಗಿದೆ. ಕೊಡಗಿನ ಕಾಂಗ್ರೆಸ್ ನಾಯಕರುಗಳು ಕೂಡ ಈ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಯಶಸ್ವಿಯಾಗಿದ್ದೇವೆ. ಇನ್ನು ಮುಂದೆಯಾದರು ಸುಳ್ಳು ಹೇಳಿ ಅಪಪ್ರಚಾರ ಮಾಡುವ ಚಾಳಿಯನ್ನು ಬಿಜೆಪಿ ಬಿಡಲಿ ಎಂದು ಎಂ.ಎ.ಕಲೀಲ್ ಬಾಷ ಆಗ್ರಹಿಸಿದ್ದಾರೆ.
Breaking News
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*