ಸೋಮವಾರಪೇಟೆ NEWS DESK ನ.23 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರ ಸೇನಾನಿಗಳಿಗೆ ಅಗೌರವ ತೋರಿರುವುದು ಇಡೀ ದೇಶಭಕ್ತರಿಗೆ ಮಾಡಿದ ಅಪಮಾನವಾಗಿದೆ. ಪ್ರಕರಣದ ಆರೋಪಿ ವಿರುದ್ಧ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ರಾಷ್ಟ್ರ ರಕ್ಷಣೆಗಾಗಿ ಅಪಾರ ಕೊಡುಗೆಯನ್ನು ನೀಡಿ ಭಾರತೀಯ ಸೇನೆಯನ್ನು ಬಲಿಷ್ಠಗೊಳಿಸಿದ ವೀರ ಸೇನಾಧಿಕಾರಿಗಳ ಅವಹೇಳನವನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಂದ ಪ್ರೇರೇಪಣೆಗೊಂಡು ಇಂದು ಕೂಡ ಕೊಡಗು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಯುವಕರು ಸೇನೆಗೆ ಸೇರ್ಪಡೆಯಾಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದನ್ನು ಅರಿಯದ ಕಿಡಿಗೇಡಿ ಅತ್ಯಂತ ಅವಿವೇಕತನದಿಂದ ವರ್ತಿಸಿದ್ದು, ಮಹಾನ್ ಸೇನಾನಿಗಳ ಬಗ್ಗೆ ಅಗೌರವ ತೋರಿರುವುದನ್ನು ಕಟು ಶಬ್ಧಗಳಲ್ಲಿ ಖಂಡಿಸುವುದಾಗಿ ಎಸ್.ಮಹೇಶ್ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*