ಮಡಿಕೇರಿ NEWS DESK ನ.24 : ಭಾರತೀಯ ಸೇನೆಗೆ ಅಪಾರ ಶಕ್ತಿಯನ್ನು ತುಂಬಿದ ಮತ್ತು ತಮ್ಮದೇ ಆದ ಕೊಡುಗೆಯನ್ನು ನೀಡಿದ ವಿಶ್ವ ವಿಖ್ಯಾತ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗು ಜಿಲ್ಲೆಯ ಹೆಮ್ಮೆಯ ವೀರಪುತ್ರರಾಗಿದ್ದಾರೆ. ಇವರ ಸೇನಾ ಸಾಧನೆಯ ಬಗ್ಗೆ ಅರಿವಿಲ್ಲದ ಕಿಡಿಗೇಡಿ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿ ಸಮಾಜದ ಸಾಮರಸ್ಯ ಕದಡುವ ಯತ್ನ ಮಾಡಿದ್ದಾನೆ. ದೇಶಭಕ್ತ ಯೋಧರನ್ನು ಅವಮಾನಿಸಿದ ಆರೋಪಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಈತನನ್ನು ಗಡಿಪಾರು ಮಾಡಬೇಕು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿ.ಜಿ.ಮೋಹನ್ ಆಗ್ರಹಿಸಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*