ಕುಶಾಲನಗರ, ನ.25 NEWS DESK : ಭವಿಷ್ಯದ ಬೆಳಕಾಗಿರುವ ವಿದ್ಯಾರ್ಥಿಗಳು ಜ್ಞಾನಾರ್ಜನೆ ಜತೆಗೆ ದೇಶಾಭಿಮಾನ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಚಿಂತಕ ಬಸವಕುಮಾರ್ ಪಾಟೀಲ್ ಹೇಳಿದರು.
ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ
ಅಕ್ಷರ ಜ್ಯೋತಿಯಾತ್ರೆಯ ವತಿಯಿಂದ. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಘಟಕ ಹಾಗೂ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಮತ್ತು ಉತ್ತಮ ವ್ಯಕ್ತಿತ್ವ ಬೆಳವಣಿಗೆ ಹಾಗೂ ಪರೀಕ್ಷಾ ಫಲಿತಾಂಶದ ಸಫಲತೆಯ ಮಾರ್ಗೋಪಾಯಗಳು ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹುಟ್ಟಿಸಿ, ಉನ್ನತ ಕನಸುಗಳನ್ನು ಬಿತ್ತಿ, ವಿದ್ಯಾರ್ಥಿಗಳಿಗೆ ಪ್ರೇರಣೆ, ಸ್ಪೂರ್ತಿ ನೀಡುವುದರ ಮೂಲಕ ಉನ್ನತ ಸಾಧನೆಯ ಛಲ ಮೂಡಿಸುವುದು. ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ಕಿತ್ತು ಹಾಕಿ ವಿದ್ಯಾರ್ಥಿಗಳ ಮನೋಭಾವದಲ್ಲಿ ಸಕಾರಾತ್ಮಕ ಚಿಂತನೆ ಬೆಳೆಸುವುದು ಎಂದು ಅಕ್ಷರ ಜ್ಯೋತಿ ಯಾತ್ರೆಯ ಉದ್ದೇಶ ವಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನದ ಜತೆಗೆ ಪರೀಕ್ಷಾ ಫಲಿತಾಂಶ ಸುಧಾರಣೆಯ ಮಾರ್ಗೋಪಾಯಗಳನ್ನು ಮನವರಿಕೆ ಮಾಡಿ ಕೊಡುವುದು ಎಂದರು. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಮಕ್ಕಳಿಗೆ ಶಿಕ್ಷಣದ ಮೌಲ್ಯ, ಸಂಸ್ಕಾರದ ತತ್ವ ಹಾಗೂ ವಿದ್ಯಾಭ್ಯಾಸದ ನೀತಿ ಪಾಠವನ್ನು ಸೇರಿದಂತೆ ಮಕ್ಕಳಿಗೆ ಫಲಿತಾಂಶದಲ್ಲಿ ಏಳ್ಗೆ ಹಾಗೂ ಅವರು ಜೀವನದಲ್ಲಿ ಅಭಿವೃದ್ದಿ ಹೊಂದುವ ನಿಟ್ಟಿನಲ್ಲಿ ಮಕ್ಕಳಿಗೆ ಉಪನ್ಯಾಸ ನೀಡುವ ಯೋಜನೆಯನ್ನು ಅಕ್ಷರ ಜ್ಯೋತಿಯಾತ್ರೆಯ ಉದ್ದೇಶವಾಗಿದೆ ಎಂದು ಬಸವಕುಮಾರ ಪಾಟೀಲ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ ನಾಗೇಂದ್ರಸ್ವಾಮಿ ಮಾತನಾಡಿ,ಶೈಕ್ಷಣಿಕ ಜಾಗೃತಿ ಹಾಗೂ ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತುವ ಯಾತ್ರೆಯ ಉದ್ದೇಶ ಮತ್ತು ಸಮಾಜದ ಉತ್ತಮ ಬೆಳವಣಿಗೆಗೆ ಇದು ಸಹಕಾರಿಯಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ಮೌಢ್ಯ, ಕಂದಾಚಾರಗಳ ವಿರುದ್ಧ ಧ್ವನಿ ಎತ್ತುವ ಮೂಲಕ ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದರು. ಕನ್ನಡ ಭಾರತಿ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ವೀರಶೈವ – ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ನೌಕರರ ಸಂಘದ ಅಧ್ಯಕ್ಷ ಎಸ್.ನಂದೀಶ್, ನಿವೃತ್ತ ಮುಖ್ಯ ಶಿಕ್ಷಕ ಎಂ.ಎಸ್.ಗಣೇಶ್, ಕುಶಾಲನಗರ ಜೆಸಿಐ ಕಾವೇರಿ ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಎಂ.ಜಿ.ರಜನೀಕಾಂತ್, ಉಪನ್ಯಾಸಕರು ಇದ್ದರು.