
ನಾಪೋಕ್ಲು ನ.25 NEWS DESK : ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‍ಶಿಪ್ ನಲ್ಲಿ ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಶಶಾಂಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಐಎಫ್‍ಸಿಸಿ-2024 ಆಯೋಜಿಸಿದ ಫಿಲ್ಟರ್ ಕಾಫಿ ತಯಾರಿಕೆಯ ಚಾಂಪಿಯನ್ ಸ್ಪರ್ಧೆಯಲ್ಲಿ ಬಹು ಸಂಖ್ಯೆಯ ಸ್ಪರ್ಧಿಗಳು ಭಾಗವಹಿಸಿದ್ದರು. ಶಶಾಂಕ್ ಅಗಸ್ತ್ಯ ಕಾಫಿಯಲ್ಲಿ ತನ್ನ ವಿದ್ಯಾಭ್ಯಾಸದೊಂದಿಗೆ ಅರೆಕಾಲಿಕ ಉದ್ಯೋಗವನ್ನು ಮಾಡುತ್ತಿದ್ದು, ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ ಎಂದು ಮೂರ್ನಾಡು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.









