ಮಡಿಕೇರಿ ನ.25 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ನ.30 ರಂದು ನಡೆಯಲಿದೆ. ಮಡಿಕೇರಿಯ ಲಯನ್ ಕ್ಲಬ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಶಿಕ್ಷಣ ಇಲಾಖೆಯ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ.ದೊಡ್ಡೇಗೌಡ ಭಾಗವಹಿಸಲಿದ್ದಾರೆ. ಅಪರಾಹ್ನ ಎರಡು ಗಂಟೆಗೆ ನಡೆಯುವ ಪ್ರಶಸ್ತಿ ಪ್ರಧಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಶ್ರೀ ಲೋಕನಾಥ್ ಅಮೆಚೂರು ವಹಿಸಲಿದ್ದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಭಾಗವಹಿಸಲಿದ್ದಾರೆ. 2023 -24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾದಾಪುರದ ಶ್ರೀಮತಿ ಚನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದವಿಯ. ಯು, ರವರಿಗೆ ಟಿ.ಪಿ ರಮೇಶ್ ದತ್ತಿನಿಧಿ ಆಶಯದಂತೆ ಗೌರವಿಸಿ ಸನ್ಮಾನಿಸಲಾಗುವುದು. ಗೌರವ ಪುರಸ್ಕೃತ ವಿದ್ಯಾರ್ಥಿನಿಯನ್ನು ದತ್ತಿದಾನಿಗಳಾದ ಟಿ.ಪಿ.ರಮೇಶ್ ಸನ್ಮಾನಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಜನಪದ ನೃತ್ಯ ಸ್ಪರ್ಧೆಯ ಬಹುಮಾನವನ್ನು ಮಡಿಕೇರಿ ಲಯನ್ಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷರಾದ ಅಂಬೆಕಲ್ ನವೀನ್ ವಿತರಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ಭಾರತೀಯ ರಮೇಶ್ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.