ಕುಶಾಲನಗರ, ನ.26 NEWS DESK : ವಿದ್ಯಾರ್ಥಿ ಸಮುದಾಯ ಹಾಗೂ ಯುವಜನತೆಯಲ್ಲಿ ಶಿಸ್ತು- ಸಂಯಮ, ಭೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದರು.
ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕುಶಾಲನಗರದಲ್ಲಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಧ್ಯೇಯೋದ್ದೇಶಗಳ ಕುರಿತು ಮಾಹಿತಿ ನೀಡಿದ ಅವರು, ವಿಶ್ವಶಾಂತಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲ ಸಂಕಲ್ಪವಾಗಿದೆ ಎಂದರು. ಯುವಜನತೆಯಲ್ಲಿ ಶಿಸ್ತು- ಸಂಯಮ, ಭೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು. ಯುವ ಸಮೂಹ ದೇಶದ ಶಕ್ತಿ. ಹೀಗಾಗಿ, ಯುವ ಸಮುದಾಯ ಸ್ಕೌಟ್ಸ್ ಮತ್ತು ಗೈಡ್ಸ್ ನ ಉದ್ದೇಶದೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ದೇಶದ ಹಿತ ಕಾಯುವಲ್ಲಿ ಸಂಕಲ್ಪ ಹೊಂದಬೇಕು ಎಂದರು. ವಿಶ್ವಶಾಂತಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲ ಸಂಕಲ್ಪವಾಗಿದೆ ಎಂದರು. ಯುವ ಸಮೂಹ ದೇಶದ ಶಕ್ತಿ. ಹೀಗಾಗಿ, ಯುವ ಸಮುದಾಯ ಸ್ಕೌಟ್ಸ್ ಮತ್ತು ಗೈಡ್ಸ್ ನ ಉದ್ದೇಶದೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ದೇಶದ ಹಿತ ಕಾಯುವಲ್ಲಿ ಸಂಕಲ್ಪ ಹೊಂದಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ಶಿಸ್ತು, ಸಂಯಮ, ದೇಶಭಕ್ತಿ ವೃದ್ಧಿಯಾಗಲಿದೆ ಎಂದು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ದೇಶದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೇಶದ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಕಾರಿಯಾಗಿದೆ ಎಂದರು. ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಮಾಜಪರ ಕಾರ್ಯ ಕ್ರಮಗಳನ್ನು ಆಯೋಜಿಸುತ್ತಿದೆ. ಇತ್ತೀಚೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉತ್ತಮ ವ್ಯಕ್ತಿತ್ವ, ಉದಾರ ಮನೋಭಾವ ಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಪಿ.ಜಿ.ಆರ್.ಸಿಂಧ್ಯ ಹೇಳಿದರು. ಕೊಡಗಿನಲ್ಲಿ ಈ ಹಿಂದೆ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹ ಸಂದರ್ಭ ಸೇರಿದಂತೆ
ಕೋವಿಡ್ ಸಂದರ್ಭದಲ್ಲಿ ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಸ್ವಯಂ ಸೇವಕರು ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಸ್ಕೌಟ್ಸ್, ಗೈಡ್ಸ್ ನ ವಾರ್ಷಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ರಾಜ್ಯ ಸ್ಕೌಟ್ಸ್ ವಿಭಾಗದ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಪರಿಸರ ಪೂರಕ ಚಟುವಟಿಕೆಗಳು ಹಾಗೂ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಥಳೀಯ ಸಂಸ್ಥೆಯ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಕುರಿತು ತಿಳಿಸಿದರು. ಸಂಸ್ಥೆಯ ವತಿಯಿಂದ ಮುಂದಿನ ದಿನಗಳಲ್ಲಿ ಕೂಡ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು ಎಂದರು. ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ , ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ,
ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ನರೇಶ್, ಸಂಸ್ಥೆಯ ಪ್ರಮುಖರಾದ ಬಿ.ಜಿ.ವಾಣಿ, ಎ.ಆರ್.ಲತಾ, ಸುನಿಲ್ ರಾವ್, ಎಂ.ಎಸ್. ಕುಮಾರ್, ಎಂ.ಮಧುಸೂದನ್, ಬಾಪು, ವೇಣು ಆಚಾರ್ಯ, ವಸಂತ್, , ರಾಜೇಶ್, ಜಯರಾಜ್ ಮೊದಲಾದವರು ಇದ್ದರು.
ಸನ್ಮಾನ:: ಇದೇ ವೇಳೆಯಲ್ಲಿ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು
ಸ್ಥಳೀಯ ಸಂಸ್ಥೆಯ ವತಿಯಿಂದ ಅವರು ಸನ್ಮಾನಿಸಿ ಗೌರವಿಸಿದರು.