ಮಡಿಕೇರಿ NEWS DESK ನ.26 : ಗ್ರಾ.ಪಂ ಉಪ ಚುನಾವಣೆಯಲ್ಲಿ ದಕ್ಷಿಣ ಕೊಡಗಿನ ಮಂಚಳ್ಳಿ ಮತ್ತು ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಜಯ ಗಳಿಸಿದ್ದಾರೆ. ಕುಟ್ಟ ಗ್ರಾ.ಪಂ ವ್ಯಾಪ್ತಿಯ ಮಂಚಳ್ಳಿ ಕ್ಷೇತ್ರದಲ್ಲಿ ರಾಜ ಅವರು 63 ಮತಗಳ ಅಂತರದಿAದ ಗೆಲುವು ಸಾಧಿಸಿದರು. ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಗೌರಿ 54 ಮತಗಳ ಅಂತರದಿAದ ಜಯಶಾಲಿಯಾದರು. ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.










