ಮಡಿಕೇರಿ ನ.26 NEWS DESK : ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಅವರ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ತಿಳಿಸಿದರು. ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ದಿನ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಿ, ಮಕ್ಕಳು ತಮ್ಮ ಜೀವನದಲ್ಲಿ ಪ್ರತಿಜ್ಞೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅಭಿರುಚಿ ಹೊಂದುವಂತೆ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ರೂಪಿಸಬೇಕು. ಆಗ ಮಕ್ಕಳಲ್ಲಿ ತಮ್ಮಲ್ಲಿರುವ ಪ್ರತಿಭೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೆ ಮಕ್ಕಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ಸಿಕ್ಕ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಹಾರೈಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕ ಕುಮಾರ್ ಮಾತನಾಡಿ, ಪೋಷಕರು ಮತ್ತು ಶಿಕ್ಷಕಕರು ಮಕ್ಕಳಲ್ಲಿರುವ ಪ್ರತಿಭೆ, ಕೌಶಲ್ಯ ಮತ್ತು ಅಭಿರುಚಿಗೆ ತಕ್ಕಂತೆ ವೇದಿಕೆ ಕಲ್ಪಿಸಿದಲ್ಲಿ, ಮುಂದಿನ ದಿನಗಳಲ್ಲಿ ಕಲೆ ಮತ್ತು ಸಂಸ್ಕøತಿಯನ್ನು ಪ್ರತಿಬಿಂಬಿಸುವ ವ್ಯಕ್ತಿಗಳಾಗಿ ರೂಪಿಸುವಂತಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನ ದಿನದ ಅಂಗವಾಗಿ ಸಾಮೂಹಿಕವಾಗಿ ಸಂವಿಧಾನದ ಪ್ರಸ್ತಾವನೆ ಓದಲಾಯಿತು. ಹಾಗೂ ವಿವಿಧ ವಿಭಾಗದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಬ್ಲಾಸಮ್ ಶಾಲೆಯ ಶಿಕ್ಷಕರಾದ ಮಮತ, ಜಿ.ಎಂ.ಪಿ.ಶಾಲೆಯ ಶಿಕ್ಷಕರಾದ ಪ್ರವೀಣ, ಇಲಾಖೆಯ ಹಿರಿಯ ಮೇಲ್ವಿಚಾರಕಿ ಜಯಂತಿ, ಜಿಲ್ಲಾ ಬಾಲ ಭವನದ ಹರೀಶ, ಪೂಜಾ, ಬಾಲಕರ ಬಾಲಮಂದಿರದ ಸಿಬ್ಬಂದಿ ಸೂರಜ್, ಸಿಬ್ಬಂದಿಯವರು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ಅವರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಯ್ಕೆಯಾದ ಮಕ್ಕಳು ಚಿತ್ರಕಲೆಯಲ್ಲಿ ಬಿನಿತ್ ಕೆ.ಪಿ., ಹರ್ಷಿತ್ ಪೊನ್ನಪ್ಪ, ವಿಜ್ಞಾನ ಸೃಜನಾತ್ಮಕ ಆವಿಷ್ಕಾರ ಯತಿನ್ ಹಾಗೂ ಶಿವಕುಮಾರ್, ನೃತ್ಯದಲ್ಲಿ ಸಿಂಚನ ಮತ್ತು ಸಿಂಧು, ಸಂಗೀತ, ರಂಜಿತ್ ಮತ್ತು ಶ್ರಾವರಿ ರೈ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ ಟಿ.ಎಸ್ ಸ್ವಾಗತಿಸಿದರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲಾ ಅವರು ವಂದಿಸಿದರು.