ಮಡಿಕೇರಿ NEWS DESK ನ.27 : ಅಮ್ಮತ್ತಿ- ಪಾಲಿಬೆಟ್ಟ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳದ ಆಡಳಿತ ವ್ಯವಸ್ಥೆಯ ನಿರ್ಲಕ್ಷö್ಯವನ್ನು ಖಂಡಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು. ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಅಮ್ಮತ್ತಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು ಹದಗೆಟ್ಟ ರಸ್ತೆಯನ್ನು ತಕ್ಷಣ ಡಾಂಬರೀಕರಣಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು. ಕಳೆದ ಅನೇಕ ತಿಂಗಳುಗಳಿAದ ರಸ್ತೆ ತುಂಬಾ ಹೊಂಡ ಗುಂಡಿಗಳಾಗಿ ವಾಹನ ಸಂಚಾರ ಅಸಾಧ್ಯವಾಗಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆAದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









