ಸೋಮವಾರಪೇಟೆ ನ.29 NEWS DESK : ಮತದಾನದ ಹಕ್ಕನ್ನು ಯುವಜನತೆ ಚಲಾಯಿಸುವ ಮೂಲಕ ಸದೃಡ ಭಾರತ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಯಪ್ಪ ಹೇಳಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 18 ವರ್ಷ ತುಂಬಿದ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಪ್ರತಿ ಚುನಾವಣೆಯಲ್ಲೂ ಯೋಗ್ಯ ಅಭ್ಯರ್ಥಿಗಳಿಗೆ ಮತ ನೀಡಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೆ ನೈತಿಕ ಮತದಾನ ಮಾಡಬೇಕು ಎಂದು ಕಿವಿಮಾತು ಹೇಳಿದರು. ರಸಪ್ರಶ್ನೆ, ಭಿತ್ತಿಪತ್ರ ತಯಾರಿಕೆ, ಕನ್ನಡ, ಇಂಗ್ಲೀಷ್‍ನಲ್ಲಿ ಪ್ರಬಂಧ ಬರೆಯುವ ಸ್ಪರ್ಧೆಗಳು ನಡೆದವು. ತಾಲ್ಲೂಕಿನ ವಿವಿಧ ಕಾಲೇಜುಗಳಿಂದ 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕರಾದ ಹೆಚ್.ಪಿ.ಶಿವಕುಮಾರ್, ಹೆಚ್.ಬಿ.ಶಮಂತ್, ಜಿ.ಎನ್.ಹೇಮಾವತಿ, ಬಿ.ಆರ್.ಪ್ರದೀಪ್, ರಮ್ಯ, ನಿತ್ಯಾನಿಧಿ, ಪ್ರೇಕ್ಷಿತಾ, ಹೆಚ್.ಪಿ.ಸರಿತ, ಆರ್.ಎ.ಅಕ್ಷತಾ. ಸುನಿತಾ ಕುಮಾರಿ ಇದ್ದರು.