ಮಡಿಕೇರಿ ನ.29 NEWS DESK : ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಿರುವ ಮತ್ತು ಅಧಿಕಾರಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡಿರುವ ನಕಲಿ ಪರಿಸರವಾದಿಗಳ ವಿರುದ್ಧ ಸಂಸದರು ಹಾಗೂ ಶಾಸಕರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೇವ್ ಕೊಡಗು ಸಂಘಟನೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸೇವ್ ಕೊಡಗು ಪ್ರಮುಖರಾದ ಕೀಪಾಡಂಡ ಮಧು ಬೋಪಣ್ಣ ಹಾಗೂ ಬಿದ್ದಾಟಂಡ ದಿನೇಶ್ ಅವರು ಸಂವಿಧಾನದ ಒಟ್ಟು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ನಕಲಿ ಪರಿಸರವಾದಿಗಳು ಅಧಿಕಾರಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ಜಿಲ್ಲೆಗೆ ಮಾರಕವಾಗುವ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಕಾರ್ಪೋರೇಟ್ ಸಂಸ್ಥೆಗಳನ್ನು ಹಿಡಿತದಲ್ಲಿಟ್ಟುಕೊಂಡಿರುವ ಇವರುಗಳು ಸಮಾಜಮುಖಿ ಕೆಲಸ ಮಾಡುವ ದೊಡ್ಡ, ದೊಡ್ಡ ಸಂಘಟನೆಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರುಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಪರ ಜನಪ್ರತಿನಿಧಿಗಳೆಂದು ಗುರುತಿಸಿಕೊಂಡಿದ್ದಾರೆ. ಈ ಮೂವರು ಜನಪ್ರತಿನಿಧಿಗಳು ನಕಲಿ ಪರಿಸರವಾದಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸರ್ಕಾರಿ ಕಚೇರಿಗಳಲ್ಲಿ ರೈತರ ಹಾಗೂ ಜನಸಾಮಾನ್ಯರ ಕಡತಗಳು ಸುಲಭವಾಗಿ ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಸರ್ಕಾರಿ ಕಚೇರಿಗಳು ಸಂಪೂರ್ಣವಾಗಿ ಭ್ರಷ್ಟಾಚಾರ ಮುಕ್ತವಾಗಿಲ್ಲ, ಸ್ವಲ್ಪ ಪ್ರಮಾಣದ ಭ್ರಷ್ಟಾಚಾರ ಇಂದಿಗೂ ನಡೆಯುತ್ತಿದ್ದು, ಸಂಸದರು ಹಾಗೂ ಶಾಸಕರು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿಂದೆ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಎಂದು ಆರೋಪಿಸಿದ ಅವರು, ಇದೀಗ ನೂತನ ಜನಪ್ರತಿನಿಧಿಗಳು ಬಂದ ನಂತರ ಭ್ರಷ್ಟಾಚಾರ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ ಎಂದರು. ನಾಪೋಕ್ಲುವಿನ ಸೇವ್ ಕೊಡಗು ಸಂಸ್ಥೆ ಕಳೆದ 3 ದಶಕಗಳಿಂದ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಜಮ್ಮಾ ಬಾಣೆ, ಅರಣ್ಯ, ಕಾಡು ಪ್ರಾಣಿಗಳ ಉಪಟಳ, ಕಾಫಿ ಬೆಳೆಗಾರರ ಸಾಲಮನ್ನಾ ಸೇರಿದಂತೆ ವಿವಿಧ ಗಂಭೀರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಾ ಬಂದಿದೆ. ಕೇಂದ್ರ ಸರಕಾರದಿಂದ ಕಾಫಿ ಬೆಳೆಗಾರರಿಗೆ ಮೂರು ಸಾವಿರ ಕೋಟಿ ಸಾಲ ಮನ್ನಾ ಪ್ಯಾಕೇಜ್. ಬಡ್ಡಿಯಲ್ಲಿ ಸಬ್ಸಿಡಿ, ತೆರಿಗೆ ವಿನಾಯಿತಿ, ವಿದರ್ಭ ಪ್ಯಾಕೇಜ್ ದೊರೆಯುವಂತಾಗಲು ಹೋರಾಟ ನಡೆಸಿದೆ. ನಕಲಿ ಪರಿಸರವಾದಿಗಳ ಸುಳ್ಳು ಮುಖವಾಡ ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಮಧು ಬೋಪಣ್ಣ ಹಾಗೂ ಬಿದ್ದಾಟಂಡ ದಿನೇಶ್ ತಿಳಿಸಿದರು. ಸೇವ್ ಕೊಡಗು ಸಂಸ್ಥೆಯ ಪ್ರಮುಖರಾದ ಬಿದ್ದಾಟಂಡ ಜಿನ್ನು ನಾಣಯ್ಯ ಹಾಗೂ ಎನ್.ಎಸ್.ಉದಯಶಂಕರ್ ಉಪಸ್ಥಿತರಿದ್ದರು.
Breaking News
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*
- *ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ : ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
- *ನಕಲಿ ಪರಿಸರವಾದಿಗಳ ವಿರುದ್ಧ ಕ್ರಮಕ್ಕೆ ಸೇವ್ ಕೊಡಗು ಒತ್ತಾಯ*
- *ಕರಾಟೆ ಚಾಂಪಿಯನ್ಶಿಪ್ : ಪೆರುಂಬಾಡಿ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*