ಮಡಿಕೇರಿ ನ.29 NEWS DESK : ಪ್ರಸಕ್ತ (2024-25) ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ತರಬೇತಿ ನೀಡುವ ಸಂಬಂಧ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಡಿ.13 ರ ಸಂಜೆ 5.30 ರೊಳಗೆ ಸಲ್ಲಿಸಬಹುದು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 35 ವರ್ಷ ಹಾಗೂ ಮಹಿಳೆಯರಿಗೆ 40 ವರ್ಷದೊಳಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಿರಬಾರದು. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಮತ್ತು ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್‍ನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ. ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ. ಅರ್ಜಿ ಪಡೆಯಲು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9901482763. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 9482894676. ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 7259552655 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.