ಮಡಿಕೇರಿ ನ.29 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು ಸಂಸ್ಥೆಗಳ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ಕಾಂತೂರು-ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖ್ಯಾತ ಇ.ಎನ್.ಟಿ ವೈದ್ಯ ಡಾ.ಮೋಹನ್ ಅಪ್ಪಾಜಿ, ಕ.ಸಾ.ಪ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಆಡಳಿತಾಧಿಕಾರಿ ಅಕ್ಷತಾ ಬಿ.ಶೆಟ್ಟಿ ಹಾಜರಿದ್ದರು.
:: ಮೆರವಣಿಗೆ :: ಬೆಳಿಗ್ಗೆ ಮೂರ್ನಾಡು ವಿದ್ಯಾಸಂಸ್ಥೆಯಿಂದ ಮೂರ್ನಾಡು-ಕೊಂಡಂಗೇರಿ ವೃತ್ತದವ ಮೂಲಕ ಸಾಗಿ ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಗಮನ ಸೆಳೆಯಿತು. ಮೂರ್ನಾಡು ಹೋಬಳಿ ಘಟಕದ ಪದಾಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಎನ್.ಸಿ.ಸಿ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಧ್ವಜವನ್ನು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ ಹಾಗೂ ಕನ್ನಡ ಧ್ವಜವನ್ನು ಕೊಡಗು ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.