ಮಡಿಕೇರಿ ನ.29 NEWS DESK : ಬೆಂಗಳೂರು ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಬಸವನಹಳ್ಳಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ 15 ದಿನಗಳ ನಾಟಕ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ನಾಟಕ ಮಂಡಳಿಯ ನಿರ್ದೇಶಕರಾದ ಡಾಕ್ಟರ್ ಜಾಹಿದಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿಶೇಷ ಕಲೆಗಳು ಅಡಕವಾಗಿದ್ದು, ಅವುಗಳನ್ನು ಸೂಕ್ತ ತರಬೇತಿ ಮೂಲಕ ಹೊರ ತೆಗೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಹಾಗೂ ಕಲಿಕೆಯ ಕಡೆಗೆ ಮಕ್ಕಳನ್ನು ಆಕರ್ಷಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಮಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟಕ ನಿರ್ದೇಶಕರಾದ ರಾಜೇಂದ್ರ ಪ್ರಸಾದ್, ಶಾಲಾ ಮುಖ್ಯೋಪಾಧ್ಯಾಯರಾದ ರವಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ತಾವು ಕಲಿತ ನಾಟಕವನ್ನು ಪ್ರದರ್ಶಿಸಿದರು.