Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*

ನವೆಂಬರ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.29 NEWS DESK : ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನುಗಳಿಗೆ ಮೂಲ ಸಂವಿಧಾನ. ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಹ ಸಂವಿಧಾನದ ಕೊಡುಗೆ. ಸಂವಿಧಾನದಲ್ಲಿ ಕೇವಲ ಹಕ್ಕುಗಳನ್ನು ಮಾತ್ರ ನೀಡದೆ, ಕರ್ತವ್ಯಗಳನ್ನು ನೀಡಿದ್ದು ಅದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಪ್ರತಿಯೊಬ್ಬರಿಗೂ ವಿಶೇಷ ಪ್ರತಿಭೆ ಇದ್ದು, ಅದನ್ನು ಪ್ರದರ್ಶಿಸಲು ಸಹ ಸಂವಿಧಾನ ಮೂಲ ಕಾರಣ ಎಂದರು. ಶಿಕ್ಷಣವೆಂದರೆ ಕೇವಲ ಕಲಿಕೆಯಾಗದೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದರು. ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್ ಮಾತನಾಡಿ, ಸಂವಿಧಾನ ದಿನವನ್ನು ಪ್ರತಿಯೊಬ್ಬರೂ ಹಬ್ಬದಂತೆ ಆಚರಿಸಬೇಕು ಎಂದು ನುಡಿದರು. ಭಾರತೀಯ ಸಂವಿಧಾನ ಅತ್ಯದ್ಭುತವಾದ ಸಂವಿಧಾನವಾಗಿದ್ದು, ವಿಶ್ವದಲ್ಲಿ ಮಾದರಿಯಾಗಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಎಲ್ಲಾ ಅವಕಾಶಗಳನ್ನು ನೀಡಿದೆ ಮತ್ತು ಮೂಲಭೂತ ಕರ್ತವ್ಯ ಮತ್ತು ಹಕ್ಕು ನೀಡಿದೆ ಎಂದರು. ಸಮಾಜದಲ್ಲಿ ಜ್ಞಾನದ ಕೊರತೆಯಿಂದ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಯುವ ಸಮೂಹ ಎಚ್ಚರ ಇರಬೇಕು ಎಂದು ಸಚಿನ್ ವಾಸುದೇವ್ ಕಿವಿಮಾತು ಹೇಳಿದರು. ಕನ್ನಡ ಪ್ರಾಧ್ಯಾಪಕರಾದ ಪೂಜಾರ್ ಸಂವಿಧಾನ ಅಂಗೀಕಾರವಾದ ದಿನವಾಗಿದೆ. ಸಂವಿಧಾನ ಎಂಬುದು ಮಾತೃ ಸಮಾನವೆಂದರು. ಹಲವು ದೇಶಗಳ ಉತ್ತಮ ಅಂಶಗಳನ್ನು ಅಳವಡಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ ಗ್ರಂಥ ಎಂದರು. ಪ್ರಾಂಶುಪಾಲರಾದ ಮಂದಣ್ಣ ಮಾತನಾಡಿ, ವಿಶ್ವದಲ್ಲೇ ಅದ್ಭುತ ಮತ್ತು ದೊಡ್ಡ ಗ್ರಂಥವಾಗಿದೆ. ಅದನ್ನು ಎಲ್ಲರೂ ಪಾಲಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಾಕ್ಷಾಯಿಣಿ ವಾಸುದೇವ್ ಅವರು ಮಾತನಾಡಿ ಶಿಕ್ಷಕರು ಯಾವುದೇ ವಿಚಾರದಲ್ಲಿ ಮುಗ್ಘ ಮಕ್ಕಳ ಮನಸ್ಸಿಗೆ ನೋವುಂಟಾಗದಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಹಿಂದೆ ಹಲವು ಸಮಸ್ಯೆಗಳಿಂದ ಶಿಕ್ಷಣ ಪಡೆಯುತ್ತಿದ್ದರು, ಈಗ ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಇದನ್ನು ಸರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂವಿಧಾನದ ಪ್ರಾಮುಖ್ಯತೆ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಪ್ರಥಮ ಅಜಾರಿಯಾ, ದ್ವಿತೀಯ ಅನುಷಾ, ತೃತೀಯ ಪ್ರತೀಕ್ಷಾ ಅವರು ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಳಿನಿ ಅವರು ಸ್ವಾಗತಿಸಿದರು. ಮುಬೀನ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.