Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆ ಸೇನಾಪಡೆಯ ನಿವೃತ್ತ ಯೋಧರ ಸಮಸ್ಯೆಗಳಿಗೆ ಸ್ಪಂದನೆ ಅಗತ್ಯ : ಮಹಾಸಭೆಯಲ್ಲಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆ ಸೇನಾಪಡೆಯ ನಿವೃತ್ತ ಯೋಧರ ಸಮಸ್ಯೆಗಳಿಗೆ ಸ್ಪಂದನೆ ಅಗತ್ಯ : ಮಹಾಸಭೆಯಲ್ಲಿ ಒತ್ತಾಯ*

ನವೆಂಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.30 NEWS DESK : ರಾಷ್ಟ್ರದ ಗಡಿಗಳ ಮತ್ತು ಆಂತರಿಕ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಯೋಧರ ಹಾಗೂ ಅವರ ಕುಟುಂಬದ ಮೂಲಭೂತ ಸಮಸ್ಯೆಗಳಿಗೆ ಅಗತ್ಯ ಸ್ಪಂದನ ದೊರಕಬೇಕೆನ್ನುವ ಆಶಯ ಕೊಡಗು ಜಿಲ್ಲಾ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ವ್ಯಕ್ತವಾಯಿತು. ನಗರದ ಪೊಲೀಸ್ ಸಮುದಾಯ ಭವನ ಮೈತ್ರಿಯಲ್ಲಿ ನಡೆದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಪಲಿಯಂಡ ಚಂಗಪ್ಪ ಅವರು ಮಾತನಾಡಿ, ಬಿಎಸ್‍ಎಫ್, ಸಿಆರ್‍ಪಿಎಫ್, ಸಿಐಎಸ್‍ಎಫ್ ಮತ್ತು ಎಸ್‍ಎಸ್‍ಬಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರು ಸಾಕಷ್ಟು ಸಮಸ್ಯೆಗಳನ್ನು ಹೊಂದಿದ್ದಾರೆ. ಇವುಗಳ ನಿವಾರಣೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿರುವುದಾಗಿ ತಿಳಿಸಿದರು.
ಹಾಸನದಲ್ಲಿ ರಾಜ್ಯದ ಏಕೈಕ ಸ್ವಂತ ಕಟ್ಟಡ :: ಕೊಡಗು ಜಿಲ್ಲೆಯಲ್ಲಿ ಅರೆಸೇನಾಪಡೆಗಳ ಒಕ್ಕೂಟ ಕಳೆದ ಒಂದು ದಶಕಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿದ್ದರು, ಅಗತ್ಯ ಆರ್ಥಿಕ ಶಕ್ತಿಯನ್ನು ಹೊಂದಿಲ್ಲವೆಂದು ತಿಳಿಸಿ, ಪ್ರಸ್ತುತ ಇಡೀ ರಾಜ್ಯದಲ್ಲೆ ಹಾಸನದಲ್ಲಿ ಅರೆಸೇನಾಪಡೆಗಳ ಸಂಘಟನೆ ತನ್ನದೇ ಆದ ಸ್ವಂತ ಕಟ್ಟಡವನ್ನು ಹೊಂದಿಕೊಂಡಿದೆ. ಈ ಕಟ್ಟಡ ನಿರ್ಮಾಣಕ್ಕೆ ಕೊಡಗಿನ ಅರೆಸೇನಾಪಡೆಗಳ ಒಕ್ಕೂಟವು ತನ್ನದೇ ಆದ ಸಣ್ಣ ಪ್ರಮಾಣದ ಆರ್ಥಿಕ ನೆರವನ್ನು ಒದಗಿಸಿದೆಯೆಂದು ತಿಳಿಸಿ, ಮುಂಬರುವ ದಿನಗಳಲ್ಲಿ ಜಿಲ್ಲೆಯ ಅರೆಸೇನಾಪಡೆಗಳ ಒಕ್ಕೂಟ ತನ್ನ ಕಾಲ ಮೇಲೆ ತಾನು ನಿಲ್ಲುವ ಹಂತದಲ್ಲಿ ಹೊರ ಜಿಲ್ಲೆಯ ಅರೆಸೇನಾಪಡೆಗಳ ಸಂಘಟನೆಗಳ ನೆರವು ಬೇಕಾಗುತ್ತದೆಂದು ಅನಿಸಿಕೆ ವ್ಯಕಪಡಿಸಿದರು.
ಕ್ಯಾಂಟಿನ್ ಸೌಲಭ್ಯ ಅಗತ್ಯವಿದೆ :: ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರು ಮತ್ತು ಅವರ ಕುಟುಂಬಸ್ಥರಿಗೆ ಅಗತ್ಯ ಕ್ಯಾಂಟಿನ್ ಸೌಲಭ್ಯ ದೊರಕಬೇಕಾಗಿದೆ. ಪ್ರಸ್ತುತ ಪೊಲೀಸ್ ಇಲಾಖೆಯ ಕಾರ್ಡ್ ಪಡೆದುಕೊಂಡವರಿಗೆ ಪೊಲೀಸ್ ಕ್ಯಾಂಟಿನ್‍ನ ಕೆಲ ಸವಲತ್ತುಗಳು ದೊರಕುತ್ತಿರುವುದಾಗಿ ಮಾಹಿತಿ ನೀಡಿದರು.
ಆರೋಗ್ಯದತ್ತ ಹೆಚ್ಚಿನ ಕಾಳಜಿ ಇರಲಿ :: ಅರೆಸೇನಾಪಡೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿರುವವರು ಪ್ರಮುಖವಾಗಿ ತಮ್ಮ ಆರೋಗ್ಯದತ್ತ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯ. ಪ್ರಸ್ತುತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ದುಬಾರಿಯಾಗುತ್ತಿದೆಯೆಂದು ತಿಳಿಸಿ, ಆರೋಗ್ಯ ಸಂರಕ್ಷಣೆಯತ್ತ ಪ್ರತಿಯೊಬ್ಬರು ಹೆಚ್ಚಿನ ಮುತುವರ್ಜಿ ವಹಿಸುವಂತೆ ಕರೆ ನೀಡಿದರು. ಸಭೆಯಲ್ಲಿ ಅರೆಸೇನಾಡೆಗಳ ಒಕ್ಕೂಟದ ಸದಸ್ಯರಾಗಿದ್ದು, ಕಳೆದ ಒಂದು ಆರ್ಥಿಕ ಸಾಲಿನಲ್ಲಿ ನಿಧನರಾದವರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಅರೆ ಸೇನಾಪಡೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಜಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿತ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಸಿಆರ್‍ಪಿಎಫ್ ಡೆಪ್ಯೂಟಿ ಕಮಾಂಡೆಂಟ್ ಮಂಜುನಾಥ್, ಉದ್ಯಮಿಗಳಾದ ಗೋಪಾಲ್, ಸಿಆರ್‍ಪಿಎಫ್‍ನ ಅಧಿಕಾರಿ ಸುರೇಶ್ ಹಾಗೂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಸಂಚಾಲಕರಾದ ಎನ್.ಎಂ.ಭೀಮಯ್ಯ, ಕಾರ್ಯದರ್ಶಿ ಬಿ.ಎಂ.ರವೀಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕುದುಪಜೆ ಆನಂದ ಸೇರಿದಂತೆ ಹಲಪ್ರಮುಖರು, ನಿವೃತ್ತ ಯೋಧರು, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.