ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸೇರಿದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ QR code ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ , ಉಪಾಧ್ಯಕ್ಷರಾದ ಮಂಜುಳ, ಶಾಲಾ ಸಿಬ್ಬಂದಿಗಳು , ಮಕ್ಕಳು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.











