ಮಡಿಕೇರಿ ನ.30 NEWS DESK : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ರಾಜಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.











