ನಾಪೋಕ್ಲು ಡಿ.2 NEWS DESK : ಮಡಿಕೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಕೋ ಪೈಲೆಟ್ ಕಾರ್ಯಕ್ರಮ ನಡೆಯಿತು. ಮಡಿಕೇರಿ ಸರ್ವ ಶಿಕ್ಷಣ ಅಭಿಯಾನ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ ಉದ್ಘಾಟಿಸಿ, ಮಾತನಾಡಿದ ಅವರು, ಶಿಕ್ಷಕೋ ಪೈಲೆಟ್ ಕಾರ್ಯಕ್ರಮವನ್ನು ಶಿಕ್ಷಕರಿಗೆ ತಮ್ಮ ಪಾಠ ಯೋಜನೆಗಳನ್ನು ಹೇಗೆ ವಿಶೇಷ ರೀತಿಯಲ್ಲಿ ಮಕ್ಕಳ ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಸಿದ್ಧಪಡಿಸಿಕೊಳ್ಳಬಹುದು ಎಂಬುದರ ಕುರಿತು ಸಮಗ್ರ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯ ಅಧಿಕಾರಿ ಕೆ.ಪಿ.ಗುರುರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ತರಬೇತಿಯಲ್ಲಿ 18 ಮಂದಿ ಶಿಕ್ಷಕರು ಪಾಲ್ಗೊಂಡಿದ್ದರು. ಶಿಕ್ಷಕರು, ಇಲಾಖೆ ಅಧಿಕಾರಿಗಳು ಕಾರ್ಯಕ್ರಮಕ್ಕೆ ಪೂರಕವಾಗಿ ಮಾಹಿತಿಯನ್ನು ನೀಡಿದರು. ಕಾರ್ಯಗಾರದಲ್ಲಿ ಬಿಆರ್ ಪಿ ಮಂಜುಳ ಚಿತ್ರಾಪುರ, ಸಂಸ್ಥೆಯ ಎಜಿಎಂ ಅಶ್ವತ್, ಜಿಲ್ಲಾ ಸಂಯೋಜಕ ರಕ್ಷಿತ್ ಮತ್ತು ಹರೀಶ್ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.