
ಸೋಮವಾರಪೇಟೆ
NEWS DESK ಡಿ.2 : ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜನರು ಎಚ್ಚರ ವಹಿಸುವಂತೆ ಸೋಮವಾರಪೇಟೆ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಮನವಿ ಮಾಡಿದ್ದಾರೆ. ಹವಾಮಾನ ಇಲಾಖೆಯ ವರದಿಯಂತೆ ಡಿ.3 ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚಿನ ಕುಗ್ರಾಮಗಳಿದ್ದು, ರೈತಾಪಿ ವರ್ಗ ತಮ್ಮ ರಕ್ಷಣೆಯೊಂದಿಗೆ ಜಾನುವಾರುಗಳ ರಕ್ಷಣೆಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

