
ಮೈಸೂರು NEWS DESK ಡಿ.2 : ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಕೊಡಗು, ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಇಂದು ಭೇಟಿ ಮಾಡಿದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ನ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹುಣಸೂರು ಶಾಸಕ ಹರೀಶ್ ಗೌಡ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಮತ್ತಿತರರು ತಂಬಾಕು ಬೆಳೆಗಾರರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಚರ್ಚಿಸಲಾಯಿತು. ತಂಬಾಕು ಮಂಡಳಿಯ ಕಚೇರಿಯನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಬೇಕು, ತಂಬಾಕು ರೈತರಿಗೆ ಜೀವ ವಿಮಾ ಭದ್ರತೆಯನ್ನು ಹೆಚ್ಚಿಸಬೇಕು, ಅತಿವೃಷ್ಟಿಯಿಂದ ಆಗಿರುವ ನಷ್ಟವನ್ನು ತಗ್ಗಿಸಲು ತಂಬಾಕು ಮಂಡಳಿಯಿಂದ ಸಕಾಲದಲ್ಲಿ ಪರಿಹಾರ ನೀಡಬೇಕು ಎಂದು ಯದುವೀರ್ ಮನವಿ ಮಾಡಿದರು.











