Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ*

ಡಿಸೆಂಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.3 NEWS DESK : ಸಂವಿಧಾನ ಓದು ಅಭಿಯಾನವು ನಾಡಿನಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಡಿ.7 ಮತ್ತು 8 ರಂದು ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ ನಡೆಯಲಿದೆ ಎಂದು ಅಭಿಯಾನದ ರಾಜ್ಯ ಕೇಂದ್ರ ಸಂಯೋಜಕ ವಿ.ರಾಜಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳು ನಡೆಯಲಿರುವ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ, ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕøತಿಕ ಹಾಗೂ ಪ್ರಗತಿಪರ ಆಶಯವುಳ್ಳ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಉದ್ಘಾಟಿಸಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಎ.ಕೆ.ಲೋಕೇಶ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ನರಸಿಂಹಯ್ಯ, ಕೊಡಗು ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ.ಸುರೇಶ್ ಶರ್ಮ, ಕೊಡಗು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕರಾದ ಕೆ.ಮಂಜುಳ, ಕೊಡಗು ಅಹಿಂದ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಟಿ.ಪಿ.ರಮೇಶ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದರಾ ಅಧ್ಯಕ್ಷ ಸವಿರಾ ರೈ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಶಿಬಿರದಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಸಂವಿಧಾನದ ರಚನೆ ಮತ್ತು ಮೂಲತತ್ವ, ಶಾಂತಿ ನಾಗಲಾಪುರ ಸಂವಿಧಾನ ಮತ್ತು ಮಹಿಳೆ, ಡಾ.ಗೋವಿಂದಪ್ಪ ಪಾವಗಡ ಸಂವಿಧಾನ ಮತ್ತು ಪ್ರಜಾಪ್ರಭುತ್ವ, ಬಿ.ರಾಜಶೇಖರ ಮೂರ್ತಿ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ, ಆರ್.ರಾಮಕೃಷ್ಣ ಸಂವಿಧಾನ ಮತ್ತು ಜಾತ್ಯಾತೀತತೆ, ಡಾ.ಎನ್.ವೈ.ಗುರಶಾಂತ್ ಸಂವಿಧಾನ ಮತ್ತು ಒಕ್ಕಟ ವ್ಯವಸ್ಥೆ ಕುರಿತು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.
ಡಿ.8 ರಂದು ಸಂಜೆ 4 ಗಂಟೆಗೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿರಣೆ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪ ನಿರ್ದೇಶಕ ರಂಗಧಾಮಪ್ಪ, ಮಡಿಕೇರಿ ಕ್ಷೇತ್ರ ಶಿಕ್ಷಣಧಿಕಾರಿ ಡಾ.ಬಿ.ಎಸ್.ಸತೀಶ್ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಸಂವಿಧಾನ ಓದು ಅಭಿಯಾನ-ಕರ್ನಾಟಕದಿಂದ 10 ಲಕ್ಷ “ಸಂವಿಧಾನ ಓದು” ಪರಿಷ್ಕøತ ಕೃತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ ಎಂದರು. ಸಂವಿಧಾನ ಓದು ಅಧ್ಯಯನ ಅಭಿಯಾನವು ದೀರ್ಘಕಾಲ ಮುನ್ನಡೆಯುತ್ತಿದ್ದು, ದಿನೇ ದಿನೇ ನಾಡಿನ ಜನರ ವಿಶ್ವಾಸವನ್ನುಗಳಿಸುತ್ತಿದೆ. ಹೀಗೆ ದೇಶದಲ್ಲೇ ಮಾದರಿಯಾಗಿ ಸಂವಿಧಾನ ಕುರಿತು ಜನಾಂದೋಲನ ರೂಪಿಸುತ್ತಿರುವ ಅಭಿಯಾನವನ್ನು ಜನತೆ ಬೆಂಬಲಿಸಬೇಕೆಂದು ಮನವಿ ಮಾಡಿದ ಅವರು, ಶಿಬಿರದಲ್ಲಿ ಆಸಕ್ತರು https://docs.google.com/forms/d/1pdMmCs4SvquCnkxfh51xKrG_qJHYMWUAHCgP7KaCol0/edit?ts=674d1237ನೊಂದಣಿ ಮಾಡಿಕೊಂಡು ಭಾಗವಹಿಸಬೇಕೆಂದು ವಿ.ರಾಜೇಖರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಅಭಿಯಾನದ ರಾಜ್ಯ ಕೇಂದ್ರ ಸಂಯೋಜರಾದ ರಾಜು ಗೊರೂರು, ಹೆಚ್.ಎನ್.ಹರಿ, ಹಾಸನ ವಿಭಾಗದ ಉಸ್ತುವಾರಿ ಜಿ.ಟಿ.ವೆಂಕಟೇಶ್, ಕೊಡಗು ಉಸ್ತುವರಿ ಹೆಚ್.ಎಂ.ನಂದಕುಮಾರ್, ಪ್ರಮುಖರಾದ ಎಮ್.ಎನ್.ರಾಜಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.