Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
  • *ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*
  • *ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಪೂರಕ ಅಂದಾಜಿನಲ್ಲಿ 44 ಕೋಟಿ ಮಂಜೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಪೂರಕ ಅಂದಾಜಿನಲ್ಲಿ 44 ಕೋಟಿ ಮಂಜೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*

ಡಿಸೆಂಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಡಿ.3 NEWS DESK : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ ಎಂದರು. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.  ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400/- ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000/- ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ…

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.