ಮಡಿಕೇರಿ NEWS DESK ಡಿ.3 : ಫೆಂಜಲ್ ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ ಗುಡುಗು ಸಹಿತ 3 ಇಂಚು ಮಳೆ ಸುರಿದಿದೆ. ಮಡಿಕೇರಿಯಲ್ಲಿ ರಾತ್ರಿ ವೇಳೆ ಸುರಿದ ಗಾಳಿ, ಭಾರೀ ಗುಡುಗು ಸಹಿತ ನಿರಂತರ ಮಳೆ ಜನರಲ್ಲಿ ಆತಂಕ ಸೃಷ್ಟಿಸಿತು. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 44.93 ಮಿ.ಮೀ. ಮಳೆಯಾಗಿದೆ. ಅತಿಹೆಚ್ಚು ಮಳೆ ಸಂಪಾಜೆ 94 ಮಿ.ಮೀ ಮತ್ತು ಭಾಗಮಂಡಲ 90 ಮಿ.ಮೀ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 3093.22 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1789.35 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ 74.30 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 48.20 ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 36.94 ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ 28.70 ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ 36.50 ಮಿ.ಮೀ ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2835.21 ಅಡಿಗಳು. ಕಳೆದ ವರ್ಷ ಇದೇ ದಿನ 2835.79 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 29.60 ಮಿ.ಮೀ., ಇಂದಿನ ನೀರಿನ ಒಳಹರಿವು 651 ಕ್ಯುಸೆಕ್, ಕಳೆದ ವರ್ಷ ಇದೇ ದಿನ 128 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ನಾಲೆಗೆ 800 ಕ್ಯುಸೆಕ್.










