ಮಡಿಕೇರಿ NEWS DESK ಡಿ.3 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಅವರ ನೇತೃತ್ವದಲ್ಲಿ ಜಿಲ್ಲೆಯ ಲಾರಿ, ಟ್ಯಾಕ್ಸಿ, ಸರಕು ವಾಹನದ ಮಾಲೀಕ, ಚಾಲಕರ ಸಭೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಯಾವುದೇ ರೀತಿಯ ಅಪಘಾತಗಳಿಗೆ ಅವಕಾಶ ನೀಡಬಾರದು, ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು, ಸಾರಿಗೆ ನಿಯಮ ಪಾಲಿಸಬೇಕು ಮತ್ತು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಪೊಲೀಸ್ ಅಧಿಕಾರಿಗಳು ಮಾಲೀಕ ಹಾಗೂ ಚಾಲಕರಲ್ಲಿ ಮನವಿ ಮಾಡಿದರು. ನಂತರ ಎಲ್ಲಾ ಸಂಚಾರಿ ನಿಯಮ ಪಾಲನೆ ಮಾಡುವ ಕುರಿತು ಸೂಕ್ತ ಸೂಚನೆಗಳನ್ನು ನೀಡಲಾಯಿತು. ಲಾರಿ ಮತ್ತು ಪಿಕ್ ಅಪ್‌ಗಳಲ್ಲಿ ಮರಳು, ಜಲ್ಲಿ-ಕಲ್ಲು ಅನ್ನು ತೆಗೆದುಕೊಂಡು ಹೋಗುವಾಗ ಕಡ್ಡಯವಾಗಿ ಟಾರ್ಪಲನ್ನು ಮುಚ್ಚಿರಬೇಕು. ಟಾರ್ಪಲನ್ನು ಮುಚ್ಚದೇ ತೆಗೆದುಕೊಂಡು ಹೋಗುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕರು ಭಾವಚಿತ್ರವನ್ನು ಕಳುಹಿಸಿ ದೂರು ನೀಡಿದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಟಿಂಬರ್ ಸಾಗಾಟ ಮಾಡುವ ವಾಹನಗಳಲ್ಲಿ ನಿಗಧಿಪಡಿಸಿದ ಭಾರಕ್ಕಿಂತ ಹೆಚ್ಚಿನ ಭಾರವನ್ನು ಹಾಕಬಾರದು. ಅತೀ ವೇಗ ಮತ್ತು ಅಜಾಗರೂಕತೆಯಿಂದ ವಾಹನವನ್ನು ಚಾಲನೆ ಮಾಡಬಾರದು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಮಾತನಾಡಬೇಕು. ವಾಹನ ಸವಾರರು ಯಾವುದೇ ರೀತಿಯ ಸಂಚಾರಿ ನಿಯಮ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬಹುದು. ರಸ್ತೆಯಲ್ಲಿ ಯಾವುದೇ ಆಪಘಾತ ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು. ಪೊಲೀಸ್ ಕಂಟ್ರೋಲ್ ರೂಮ್ ಮೊಬೈಲ್ ಸಂಖ್ಯೆ: 9480804900 & ದೂರವಾಣಿ ಸಂಖ್ಯೆ: 08272 228330 ಗೆ ಮಾಹಿತಿ ನೀಡಬೇಕು. ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.
Breaking News
- *ಸೋಮವಾರಪೇಟೆ : ವಿ ಕೇರ್ ಸೂಪರ್ ಸ್ಪೆಶಾಲಿಟಿ ದಂತ ಚಿಕಿತ್ಸಾ ಕೇಂದ್ರ ಉದ್ಘಾಟನೆ*
- *ಪುತ್ತೂರು : ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ*
- *ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ*
- *ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾಮಟ್ಟದ ಕಲೋತ್ಸವ : ಸಿದ್ದಾಪುರ ವಲಯ ಚಾಂಪಿಯನ್*
- *ಸುಂಟಿಕೊಪ್ಪ : ಬೀದಿ ನಾಟಕದ ಮೂಲಕ ಹೆಚ್ಐವಿ ಕುರಿತು ಜಾಗೃತಿ*
- *ಸಹಾಯಧನಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ*
- *ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ*
- *ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ*
- *ದುಬಾರೆಗೆ ವಾರ್ಷಿಕ 4ಲಕ್ಷ ಪ್ರವಾಸಿಗರ ಆಗಮನ : ಹೈಟೆಕ್ ಶೌಚಾಲಯ ಉದ್ಘಾಟನೆ*