ಚೆಟ್ಟಳ್ಳಿ NEWS DESK ಡಿ.3 : ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸಂಪರ್ಕ ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಗ್ರಾಮಸ್ಥರ ಮನವಿಗೆ ಆಡಳಿತ ವ್ಯವಸ್ಥೆ ಸ್ಪಂದಿಸದ ಕಾರಣ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದಾಗಿ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ರಸ್ತೆಗೆ ಡಾಂಬರು ಹಾಕಲಾಗಿತ್ತು, ಅಲ್ಲದೆ ಕಾಂಕ್ರಿಟೀಕರಣ ಮಾಡಲಾಗಿತ್ತು. ಆದರೆ ಇದೀಗ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಾಂಗ್ರೆಸ್ ಆಡಳಿತ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲವೆಂದು ಅವರು ಆರೋಪಿಸಿದರು.
ಕೂಡ್ಲೂರು ಸಂಪರ್ಕ ರಸ್ತೆಯ ಗುಂಡಿ ಮುಚ್ಚುವುದು ಮತ್ತು ಕಿರಿದಾದ ರಸ್ತೆ ಬದಿಗೆ ಮಣ್ಣು ಹಾಕುವ ಕಾರ್ಯಕ್ಕೆ ಚೆಟ್ಟಳ್ಳಿ ಸಹಕಾರ ಸಂಘ ಮುಂದಾಗಿದೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದರು. ರಸ್ತೆ ಪರಿಶೀಲನೆ ಸಂದರ್ಭ ಸಹಕಾರ ಸಂಘದ ನಿರ್ದೇಶಕ ಬಟ್ಟೀರ ವೇಣು ಗೋಪಾಲ್ ಹಾಗೂ ಗ್ರಾಮಸ್ಥರು ಹಾಜರಿದ್ದರು.










