ಮಡಿಕೇರಿ NEWS DESK ಡಿ.3 : ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮತ್ತು ದುಬಾರೆ ರಿವರ್ ರಾಪ್ಟಿಂಗ್ ಅಸೋಸಿಯೇಷನ್, ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ ದುಬಾರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹೈಟೆಕ್ ಶೌಚಾಲಯವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಉದ್ಘಾಟಿಸಿದರು. ದುಬಾರೆ ಪ್ರವಾಸಿತಾಣಕ್ಕೆ ವರ್ಷಕ್ಕೆ 4 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯವನ್ನು ಪ್ರವಾಸೋದ್ಯಮ ಇಲಾಖೆ ರಿವರ್ ರಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿಯ ಅನುದಾನದಡಿ ನಿರ್ಮಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ತಿಳಿಸಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ದುಬಾರೆ ರಿವರ್ ರಾಪ್ಟಿಂಗ್ ಅಸೋಸಿಯೇಷನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.










