ಮಡಿಕೇರಿ ಡಿ.4 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25 ಸಾವಿರದಂತೆ ಶಿಷ್ಯವೇತನ ನೀಡಲಾಗುವುದು ಎಂದು ಘೋಷಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಡಿ.14 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ- 9901482763. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 9482894676 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 7259552655 ಇಲ್ಲಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.