ಪುತ್ತೂರು ಡಿ.4 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಸ್ತಾರ-2024 ನಡೆಯಿತು. ಓದಿನಲ್ಲಿ ಕಳೆದುಹೋಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಅದರಲ್ಲೂ ಮುಖ್ಯವಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಿತು. ಅಂದು ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಉಪಸ್ಥಿತರಿದ್ದರು. ಪಿಯುಸಿ ನಂತರ ಮುಂದೇನು ಎನ್ನುವ ವಿಷಯದ ಬಗ್ಗೆ ಮಾಹಿತಿ, 15 ಬಗೆಯ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು, ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಮೋಜಿನ ಆಟಗಳು ಗಮನ ಸೆಳೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ.ಡಿ.ಕಲ್ಲಾಜೆ ಸಮಾರೋಪದ ನುಡಿಗಳನ್ನಾಡಿದರು. ಎಐಎಂಎಲ್ ವಿಭಾಗ ಮುಖ್ಯಸ್ಥ ಡಾ.ಗೋವಿಂದರಾಜ್, ಕಾರ್ಯಕ್ರಮ ಸಂಯೋಜಕ ಪ್ರೊ.ಅಜಯ್ ಶಾಸ್ತ್ರಿ, ವಿಭಾಗದ ವಿದ್ಯಾರ್ಥಿ ನಾಯಕ ಕಾರ್ತಿಕ್ ಪ್ರಸಾದ್, ವಿದ್ಯಾರ್ಥಿ ಸಂಯೋಜಕ ಆಕಾಂಕ್ಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮ ಸಂಯೋಜನೆಗಾಗಿ ವಿದ್ಯಾರ್ಥಿಗಳು ಸಂತಸವನ್ನು ಹಂಚಿಕೊಂಡರು. ಸುತ್ತಮುತ್ತಲಿನ ಪಿಯು ಕಾಲೇಜುಗಳ 350 ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡರು.