ಮಡಿಕೇರಿ ಡಿ.4 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪಾಲಿಬೆಟ್ಟದ ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಅವರನ್ನು ಸನ್ಮಾನಿಸಲಾಯಿತು. ನಗರದ ಓಂಕಾರ ಸದನದಲ್ಲಿ ನಡೆದ “ವಿಶ್ವ ವಿಶೇಷ ಚೇತನರ ದಿನಾಚರಣೆ” ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶುಭ ಹಾಗೂ ಗಣ್ಯರು ಶಿವರಾಜ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ವಿಮಲಾ, ಜಿಲ್ಲೆಯ ಎಲ್ಲಾ ವಿಶೇಷ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.