ಮಡಿಕೇರಿ ಡಿ.4 NEWS DESK : ಕರಿಕೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಪಿ.ಎಂ.ನಂಜುಂಡ ಹಾಗೂ ಸಹ ಪ್ರಮುಖ್ ಆಗಿ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. 1ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಜಿ.ರತೀಶ್, 2ನೇ ವಾರ್ಡ್ ಅಧ್ಯಕ್ಷರಾಗಿ ಮಧುಸೂದನ್, 3ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಬಿ.ರಾಜೇಶ್ ಹಾಗೂ 4ನೇ ವಾರ್ಡ್ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ನೇಮಕಗೊಂಡಿದ್ದಾರೆ. ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.