ಮಡಿಕೇರಿ ಡಿ.5 NEWS DESK : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಹಿಂದು ಕಾರ್ಯಕರ್ತರು ನೆರೆಯ ಬಾಂಗ್ಲಾದಲ್ಲಿನ ಹಿಂದು ಸಮುದಾಯದ ಮೇಲಿನ ದೌರ್ಜನ್ಯಗಳ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ವಿಶ್ವ ಸಂಸ್ಥೆ ಸಮಸ್ಯೆಯನ್ನು ಬಗೆಹರಿಸಲು ಪ್ರಮುಖ ಪಾತ್ರ ವಹಿಸಬೇಕೆಂದು ಆಗ್ರಹಿಸಿದರು. ಹಿಂದು ಹಿತರಕ್ಷಣಾ ಸಮಿತಿಯ ಸಂಚಾಲಕ ಸುರೇಶ್ ಮುತ್ತಪ್ಪ, ಸಮಿತಿಯ ಪ್ರಮುಖ ಕುಕ್ಕೇರ ಅಜಿತ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಮುಖರಾದ ರವಿ ಕುಶಾಲಪ್ಪ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಸಂಪತ್ ಕುಮಾರ್, ಅರುಣ್ ಶೆಟ್ಟಿ, ಮನು ಮಂಜುನಾಥ್ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.