ಮಡಿಕೇರಿ ಡಿ.5 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆ ಪ್ರಮುಖ ಕಾರ್ಯಕ್ರಮಗಳಾದ ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ಡಿ.10 ರಿಂದ 17 ರವರೆಗೆ 8 ದಿನಗಳ ಕಾರ್ಯಕ್ರಮವನ್ನು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಆಯೋಜನೆ ಮಾಡಲು ಕೇಂದ್ರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅದರಂತೆ ತರಬೇತಿ ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ ಯುವ ಜನರಿಗೆ ತರಬೇತಿ ಶಿಬಿರಗಳ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ಡಿ.8 ರೊಳಗೆ ಅರ್ಜಿಗಳನ್ನು ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-2220986 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.