ನಾಪೋಕ್ಲು ಡಿ.5 NEWS DESK : ಕಕ್ಕುಂದಕಾಡು ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಡಿ.7 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಜನರುಗಲಿದೆ. ಮಧ್ಯಾಹ್ನ 12.30 ಗಂಟೆಗೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಸೇವೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ : ದುಗ್ಗಳ ಸದಾನಂದ.