ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಿ ಬ್ಲಾಕ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಪೊಲೀಸ್ ಉಪ ಅಧೀಕ್ಷಕರಾದ ರವಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎ.ಎಂ.ಸೂರಜ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಲೋಕೇಶ್, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಮಕ್ಕಳ ವಿಶೇಷ ಪೊಲೀಸ್ ಘಟಕದೆಂ.ಬಿ.ಸುಮತಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.