ಮಡಿಕೇರಿ ಡಿ.5 NEWS DESK : ಕರಿಕೆ ಗ್ರಾಮದ ಎಳ್ಳುಕೊಚ್ಚಿ ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ತರಗತಿಯೊಂದರಲ್ಲಿ ನಾಗರಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಬೆಳಿಗ್ಗೆ ವಿದ್ಯಾರ್ಥಿಗಳು ತರಗತಿಗೆ ಆಗಮಿಸಿದಾಗ ಹಾವು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಕರೆ ತರುವ ಜೀಪು ಚಾಲಕ ಬಾಲಚಂದ್ರ ಪಾಪು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು.
ವರದಿ : ಶಿವಗಿರಿ ರಾಜೇಶ್, ಕರಿಕೆ