ವಿರಾಜಪೇಟೆ ಡಿ.6 NEWS DESK : ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗ ಬನದಲ್ಲಿ ಸ್ಕಂದ ಪಂಚಮಿಯ ಪ್ರಯುಕ್ತ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ನಾಗನಿಗೆ ಹಾಲಿನ ಅಭಿಷೇಕ, ಸೀಯಾಳ ಅಭಿಷೇಕ, ಲಂಕಾರ ಪೂಜೆ, ಕುಂಕುಮಾರ್ಚನೆ, ನಾಗತಂಬಿಲ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಬಳಿಕ ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಭಕ್ತರು ಹರಕೆಯ ವಸ್ತುಗಳನ್ನು ದೇವಸ್ಥಾನಕ್ಕೆ ಅರ್ಪಿಸಿದರು. ಪೂಜಾ ಕಾರ್ಯಕ್ರಮಗಳನ್ನು ಅರ್ಚಕರಾದ ವೇಣುಗೋಪಾಲ್ ಭಟ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಕ್ತಾದಿಗಳು, ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.