ಮಡಿಕೇರಿ ಡಿ.7 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಈ ಬಾರಿಯೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಸಂಪ್ರೋಕ್ಷಣೆ ಪೂಜೆಯೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಗಣಹೋಮ, ಸಂಪ್ರೋಕ್ಷಣೆ”, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ದೇವರಿಗೆ ಮುಂಜಾನೆಯಿಂದಲೇ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನೆರವೇರಿತು.
ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ , ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.8 ರಂದು ಶ್ರೀ ಮಹಾವಿಷ್ಣು ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಮಹಾವಿಷ್ಣು ಮತ್ತು ಪರಿವಾರ ದೇವರುಗಳ ಶುದ್ಧಿ ಕಲಶ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ರಾತ್ರಿ ಶ್ರೀ ಭೂತ ಬಲಿ, ಶ್ರೀ ಮಹಾವಿಷ್ಣು ದೇವರ ಉತ್ಸವ ನಡೆಯಲಿದೆ ಎಂದು ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಅವರು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.