ಮಡಿಕೇರಿ ಡಿ.7 NEWS DESK : ಉಡೋತ್‍ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ನಾಲ್ಕನೇ ವರ್ಷದ ನೇಮೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಮತ್ತು ಪ್ರಸಾದ ವಿತರಣೆ ನಡೆಯಿತು. ಸಂಜೆ ದೈವದ ಭಂಡಾರ ಇಳಿಯುವುದು, ರಾತ್ರಿಯಿಂದ ಮರುದಿನ ವರೆಗೆ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಎ.ಎಸ್.ಪೊನ್ನಣ್ಣ ಭೇಟೆ :: ನೆಮೋತ್ಸವದ ಪ್ರಯುಕ್ತ ರಾತ್ರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕ್ಷೇತ್ರದ ಅಭಿವೃದ್ಧಿಗೆ ಬೇಕಾದಂತ ಸಲಹೆ ಸೂಚನೆಗಳನ್ನು ಸ್ಥಳೀಯರೊಂದಿಗೆ ಚರ್ಚಿಸಿ, ಅಜ್ಜನ ಸನ್ನಿಧಿಗೆ ಕಾಣಿಕೆ ಒಪ್ಪಿಸಿದರು.