ಮಡಿಕೇರಿ ಡಿ.7 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ಗಣಪತಿ ಹೋಮ, ಕಳಸ ಪೂಜೆ, ಮಹಾ ಸುದರ್ಶನ ಹೋಮ, ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ಹಾಗೂ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಮಧ್ಯಾಹ್ನ ಶ್ರೀ ಸುಬ್ರಮಣ್ಯ ದೇವರ ಕ್ಷೇತ್ರ ಪ್ರದಕ್ಷಿಣೆ, ಮಹಾಮಂಗಳಾರತಿ ನಂತರ ನೆರೆದಿದ್ದವರಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆಯಾಗಲಿದೆ.












