ಮಡಿಕೇರಿ ಡಿ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ನೆಮ್ಮಲೆ ಗ್ರಾಮದ ಕಿತ್ತ್ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.