Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಆರೋಗ್ಯ ಇಲಾಖೆಯಿಂದ ಹಲವು ಕಾರ್ಯಕ್ರಮ : ಸಿ.ರಂಗಧಾಮಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಆರೋಗ್ಯ ಇಲಾಖೆಯಿಂದ ಹಲವು ಕಾರ್ಯಕ್ರಮ : ಸಿ.ರಂಗಧಾಮಪ್ಪ*

ಡಿಸೆಂಬರ್ 9, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.9 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಕಾರದಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಚಾಲನೆ ದೊರೆಯಿತು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ 1-19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲಾ ಮಕ್ಕಳ ಆರೋಗ್ಯ ಕಾರ್ಯಕ್ರಮದಲ್ಲಿ ಸರ್ಕಾರವು ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ ಜಂತುಹುಳು ನಿವಾರಣಾ ಮಾತ್ರೆಯನ್ನು 19 ವರ್ಷದೊಳಗಿನ ಮಕ್ಕಳು ಪಡೆದುಕೊಳ್ಳಬೇಕು. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಜೊತೆಗೆ ಜೀರ್ಣಶಕ್ತಿ ಹೆಚ್ಚಿಸುತ್ತದೆ. ಹಾಗೆಯೇ ರಕ್ತಹೀನತೆ ತಡೆಯಬಹುದು ಎಂದು ಹೇಳಿದರು. ಜಿಲ್ಲಾ ಆರ್‍ಸಿಎಚ್. ಅಧಿಕಾರಿ ಡಾ.ಮಧುಸೂದನ್ ಮಾತನಾಡಿ ರಾಷ್ಟ್ರದಾದ್ಯಂತ ಜಂತು ಹುಳು ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲಾಗುತ್ತದೆ ಎಂದರು. ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಲಾಗುತ್ತದೆ ಎಂದು ಡಾ.ಮಧುಸೂದನ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾಪೆರ್Çೀರೇಷನ್, ಸ್ಕೌಟ್ಸ್ ಮತ್ತು ಗೈಡ್ಸ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತದೆ ಎಂದರು. ಕೊಡಗು ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,33,794 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 31,558, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 1,661, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 75,369 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 10,059, ಡಿಗ್ರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 8,330, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1,746 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 5,071 ಇದ್ದಾರೆ ಎಂದು ಅವರು ವಿವರಿಸಿದರು. ಎನ್‍ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್‍ಬೆಂಡಜೋಲ್ 400 ಎಂಜಿ ಮಾತ್ರೆಗಳನ್ನು ಈಗಾಗಲೇ ಎಲ್ಲಾ ಪ್ರಾ.ಆ.ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಹಾಗೂ ಕಾರ್ಯಕ್ರಮ ಅನುಷ್ಠಾನಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿ.ಮ.ಆ.ಸ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ ಎಂದರು. 2023-24 ನೇ ಸಾಲಿನಲ್ಲಿ ಫೆಬ್ರವರಿ ಮತ್ತು ಮೇ ಎರಡು ಹಂತಗಳಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಡೆಸಲಾಗಿದ್ದು, ಕೊಡಗು ಜಿಲ್ಲೆಯು 1,34,822 ಮಕ್ಕಳ ಗುರಿಯನ್ನು ಹೊಂದಿದ್ದು, 1,34,222 ಮಕ್ಕಳಿಗೆ ಆಲ್‍ಬೆಂಡಜೋಲ್ ಗುಳಿಗೆಯನ್ನು ನೀಡಲಾಗಿದ್ದು, ಶೇ.99.55 ಪ್ರಗತಿಯನ್ನು ಸಾಧಿಸಲಾಗಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಜಿಲ್ಲಾ ಶಿಕ್ಷಣಾಧಿಕಾರಿ ಸೌಮ್ಯ ಪೊನ್ನಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಇಸಿಒ ಜಾನೆಟ್, ಕೃಷ್ಣಪ್ರಸಾದ್, ಬಿಆರ್‍ಸಿ ಗುರುರಾಜ್, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ರೋಜಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಶುಶ್ರೂಷಣಾಧಿಕಾರಿ ಭವಾನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ದೇವರಾಜು ಮತ್ತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.