ಮಡಿಕೇರಿ NEWS DESK ಡಿ.9 : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಕುಂಜಿಲ ಗ್ರಾಮದ ನಿವಾಸಿ ಮೊಹಮ್ಮದ್ ರಿಜ್ವಾನ್.ಕೆ.ಎ (35) ಬಂಧಿತ ಆರೋಪಿಯಾಗಿದ್ದಾನೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 8 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭ ಆಭರಣವನ್ನು ಪರಿಶೀಲಿಸಿದಾಗ ನಕಲಿ ಆಭರಣ ಎಂದು ತಿಳಿದು ಬಂದಿದೆ. ಆದ್ದರಿಂದ ಮೊಹಮ್ಮದ್ ರಿಜ್ವಾನ್.ಕೆ.ಎ ಈ ಹಿಂದೆ ಇದೇ ಶಾಖೆಯಲ್ಲಿ ಆಡಮಾನ ಮಾಡಿರುವ ಆಭರಣಗಳನ್ನು ಮತ್ತೊಮ್ಮೆ ಪರಿಶೀಲಿಸಿದಾಗ ಎಲ್ಲಾ ಆಭರಣಗಳು ನಕಲಿಯಾಗಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿನ ವಿವಿಧ ಕೆಡಿಸಿಸಿ ಬ್ಯಾಂಕ್ ಶಾಖೆಗಳಲ್ಲಿ ಈತ ಅಡಮಾನ ಮಾಡಿರುವ ಚಿನ್ನವನ್ನು ಪರಿಶೀಲಿಸಿದ್ದು, ವಿರಾಜಪೇಟೆ, ಕಡಂಗ, ಭಾಗಮಂಡಲ ಮತ್ತು ಮಡಿಕೇರಿ ಕಾಲೇಜು ರಸ್ತೆಯಲ್ಲಿರುವ ಶಾಖೆಯಲ್ಲಿ ನಕಲಿ ಆಭರಣಗಳನ್ನು ಆಡಮಾನ ಮಾಡಿ ಸಾಲ ಮಾಡಿರುವುದು ಕಂಡು ಬಂದಿದೆ. ಮಡಿಕೇರಿ ನಗರ, ವಿರಾಜಪೇಟೆ ನಗರ, ಭಾಗಮಂಡಲ ಮತ್ತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಮೊಹಮ್ಮದ್ ರಿಜ್ವಾನ್.ಕೆ.ಎ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ರವಿ, ಸಿಪಿಐ ರಾಜು.ಪಿ.ಕೆ, ಗ್ರಾಮಾಂತರ ಸಿಪಿಐ ಅನೂಪ್ ಮಾದಪ್ಪ.ಪಿ, ಮೇದಪ್ಪ ಐ.ಪಿ, ಪಿಎಸ್‌ಐ ಲೊಕೇಶ್, ಭಾಗಮಂಡಲ ಪಿಎಸ್‌ಐ ಶೋಭಾ ಲಾಮಣಿ, ವಿರಾಜಪೇಟೆ ಪಿಎಸ್‌ಐ ಪ್ರಮೋದ್, ಗ್ರಾಮಾಂತರ ಪಿಎಸ್‌ಐ ವಾಣಿಶ್ರೀ ಬಿ.ಎಸ್, ಡಿಸಿಆರ್‌ಬಿ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*