
ಮಡಿಕೇರಿ NEWS DESK ಡಿ.10 : ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಮತ್ತು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಭಿವೃದ್ಧಿಪರ ಕಾಳಜಿ ಹೊಂದಿದ್ದ ಮತ್ತು ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ದಿದ್ದ ಅಪರೂಪದ ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.









