ಕುಶಾಲನಗರ NEWS DESK ಡಿ.10 : ಕುಶಾಲನಗರ ಗೌಡ ಸಮಾಜದಲ್ಲಿ ಡಿ.14ರಂದು ಹುತ್ತರಿ ಹಬ್ಬ ಆಚರಣೆ ನಡೆಯಲಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್ ತಿಳಿಸಿದ್ದಾರೆ. ಅವರು ಸಮಾಜದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಗೌಡ ಸಮಾಜ, ಗೌಡ ಯುವಕ ಸಂಘ ಗೌಡ ಮಹಿಳಾ ಸ್ವಸಹಾಯ ಸಂಘ, ನಿವೃತ್ತ ಗೌಡ ಸೈನಿಕರ ಒಕ್ಕೂಟ ಸೇರಿದಂತೆ ಸಮಾಜದ ವಿವಿಧ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಅದ್ದೂರಿ ಹುತ್ತರಿ ಹಬ್ಬ ಆಚರಣೆ ಮಾಡಲಾಗುವುದು. ಸಂಜೆ 6.30ಕ್ಕೆ ಗೌಡ ಸಮಾಜದಲ್ಲಿ ಸೇರಿ ಫಲಹಾರ, ನಂತರ 7.50ಕ್ಕೆ ನೆರೆಕಟ್ಟುವುದು ತದನಂತರ ಗಣಪತಿ ದೇವಾಲಯಕ್ಕೆ ಮೆರವಣಿಗೆ ಮೂಲಕ ತೆರಳಿ ಪೂಜೆ ಸಲ್ಲಿಸಲಾಗುವುದು. 8:50ಕ್ಕೆ ಹಾರಂಗಿ ರಸ್ತೆಯಲ್ಲಿರುವ ಗೌಡ ಯುವಕ ಸಂಘ ಕಟ್ಟಡದ ಬಳಿ ಗದ್ದೆಯಿಂದ ಕದಿರು ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಸ್ಥಳದಲ್ಲಿ ಸಮುದಾಯ ಬಾಂಧವರಿಗೆ, ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷರಾದ ಸೆಟ್ಟೇಜನ ದೊರೆಗಣಪತಿ, ಕುಲ್ಲಚೆಟ್ಟಿರ ಕಾಶಿಪೂವಯ್ಯ, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಸಮಾಜದ ಕಾರ್ಯದರ್ಶಿ ಕುಲ್ಲಚನ ಹೇಮಂತ್, ದಬ್ಬಡ್ಕ ಡಾಟಿ ಶಾಂತಕುಮಾರಿ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷ ಚೆರಿಯಮನೆ ಋಷಿ ಹರೀಶ್, ನಿವೃತ್ತ ಗೌಡ ಸೈನಿಕರ ಒಕ್ಕೂಟದ ಅಧ್ಯಕ್ಷರಾದ ದೇವಜನ ಚಿನ್ನಪ್ಪ ಇದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*