ಮಡಿಕೇರಿ ಡಿ.11 NEWS DESK : ಭಾರತೀಯ ಸೇನೆಯ ಅಪ್ರತಿಮ ವೀರಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ವ್ಯಕ್ತಿಯನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಡಿ.12 ರಂದು ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ಆರು ಗಂಟೆಗಳ ಕೊಡಗು ಬಂದ್ ಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘವು ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವೀರರ ನಾಡು ಕೊಡಗಿನ ಹೆಮ್ಮೆಯ ವೀರಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರುಗಳ ಬಗ್ಗೆ ಅಗೌರವದ ಮಾತುಗಳನ್ನಾಡಿರುವ ಆರೋಪಿಯ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.